BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ


ಪೈವಳಿಕೆನಗರ, .2 : ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜನ್ಮದಿನವನ್ನು ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಶ್ರೀಮತಿ ಶ್ಯಾಮಲ ಪಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿ ಮಾತನಾಡಿದರು. ಗಾಂಧೀಜಿಯವರಿಗೆ ಸಂಬಂಧಿಸಿದ ಹಾಡನ್ನು ವಿದ್ಯಾರ್ಥಿಗಳು ಹಾಡಿದರು. ಪೈವಳಿಕೆನಗರ ಶಾಲಾ ನೌಕರರ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಎಂ ಎಸ್, ಎಸ್ ಆರ್ ಜಿ ಕನ್ವಿನರ್ ರವೀಂದ್ರನಾಥ್ ಕೆ. ಆರ್, ದೈಹಿಕ ಶಿಕ್ಷಕ ಕೆ ಎಂ ಬಲ್ಲಾಳ್, ಅಬ್ದುಲ್ ಕರೀಂ ಪಿಕೆ, ಅಬ್ದುಲ್ ಲತೀಫ್ ಕೊಕ್ಕೆಚಾಲ್, ರೈನಾ ಇವೆಟ್ ಡಿಸೋಜಾ, ಸುಮಿತ್ರಾ, ಸುನೀಶ್ ಕುಮಾರ್, ಪ್ರವೀಣ್ ಕನಿಯಾಲ ಉಪಸ್ಥಿತರಿದ್ದರು. ಶುಚೀಕರಣದ ಭಾಗವಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪೈವಳಿಕೆನಗರದ ಬಸ್ಸು ನಿಲ್ದಾಣವನ್ನು ಮತ್ತು ಪರಿಸರವನ್ನು ಸ್ವಚ್ಛಗೊಳಿಸಿದರು. ನಂತರ ವಿದ್ಯಾರ್ಥಿಗಳಿಗೆ ಶರಬತ್ತು ಮತ್ತು ಲಘು ಉಪಹಾರವನ್ನು ವಿತರಿಸಲಾಯಿತು.

No comments:

Post a Comment