BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಪೈವಳಿಕೆನಗರ, ಜೂ.26: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಎಸ್.ಆರ್.ಜಿ ಸಂಚಾಲಕರಾದ ಶ್ರೀ ರವೀಂದ್ರನಾಥ್ ಕೆ.ಆರ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಆಚರಣ ಸಮಿತಿ ಸಂಚಾಲಕಿ ಶ್ರೀಮತಿ ಶಶಿಕಲ ಕೆ, ಶ್ರೀ ಪ್ರಶಾಂತ್ ಕುಮಾರ್ ಅಮ್ಮೇರಿ ಉಪಸ್ಥಿತರಿದ್ದರು. ಫಾತಿಮತ್ ಅಸ್ಮ ಸ್ವಾಗತಿಸಿ ಪ್ರೇಕ್ಷಿತ ವಂದಿಸಿದರು. ತನುಶ್ರೀ ನಿರೂಪಿಸಿದರು. ಕ್ಲಬ್ ಸಂಚಾಲಕಿ ಶ್ರೀಮತಿ ಪಲ್ಲವಿ ಕೆ ನೇತೃತ್ವ ನೀಡಿದರು. ನಂತರ ಪೈವಳಿಕೆ ಪೇಟೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಥ ನಡೆಸಲಾಯಿತು. ಮಾದಕ ದ್ರವ್ಯದ ಅಡ್ಡ ಪರಿಣಾಮಗಳ ಕುರಿತು ಕಿರುಚಿತ್ರ ಪ್ರದರ್ಶಿಸಲಾಯಿತು. ಮಾದಕ ದ್ರವ್ಯ ವಿರೋಧಿ ಪ್ರತಿಜ್ಞೆ ಕೈಗೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ಯಾಮಲ ಪಿ ಉಪಸ್ಥಿತರಿದ್ದರು.

No comments:

Post a Comment