BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ಸಂಭ್ರಮದ ಪ್ರವೇಶೋತ್ಸವ


ಪೈವಳಿಕೆನಗರ: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾ ಪ್ರವೇಶೋತ್ಸವ ನಡೆಯಿತು. ಜೂನ್ 6 ಗುರುವಾರ ಶಾಲಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪೈವಳಿಕೆ ಗ್ರಾಮಪಂಚಾಯತ್ ಉಪಾಧ್ಯಕ್ಷೆ ಸುನಿತ ವಾಲ್ಟಿ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹೀಂ ಪಾವಲುಕೋಡಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಅಕ್ಷರದೀಪ ಬೆಳಗಿಸಿದರು. ಶಾಲಾ ನೌಕರರ ಸಂಘದ ವತಿಯಿಂದ ಸ್ಲೇಟ್, ಪೆನ್ಸಿಲ್, ರಬ್ಬರ್, ಪುಸ್ತಕ ಮೊದಲಾದ ಕಲಿಕೋಪಕರಣ ಕಿಟ್ ವಿತರಿಸಲಾಯಿತು. ಪ್ರಭಾರ ಪ್ರಾಂಶುಪಾಲ ವಿಶ್ವನಾಥ ಕುಂಬಳೆ, ಕ್ರೆಸೆಂಟ್ ಸ್ಪೋಟ್ಸ್ ಕ್ಲಬ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಮಾತನಾಡಿದರು. ಪಿಟಿಎ ಉಪಾಧ್ಯಕ್ಷ ರಮೇಶ್ ಪೈವಳಿಕೆ, ಮದರ್ ಪಿಟಿಎ ಅಧ್ಯಕ್ಷೆ ರೋಹಿಣಿ, ಪದಾಧಿಕಾರಿಗಳಾದ ಹಸೈನಾರ್, ಆದಂ, ಮೊಯಿದಿನ್ ಕುಞÂ್ಞ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಆಚರಣಾ ಸಮಿತಿ ಸಂಚಾಲಕರಾದ ಕೃಷ್ಣಮೂರ್ತಿ ಎಂ ಎಸ್ ಸ್ವಾಗತಿಸಿ ಪ್ರಭಾರ ಮುಖ್ಯೋಪಾಧ್ಯಾಯರಾದ ರವೀಂದ್ರನಾಥ್ ಕೆ ಆರ್ ವಂದಿಸಿದರು. ವಿದ್ಯಾರ್ಥಿನಿ ಮೇಧ ಪ್ರಾರ್ಥನೆ ಹಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.

No comments:

Post a Comment