BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ


ಪೈವಳಿಕೆನಗರ, ಜೂ.10: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ನಡೆಯಿತು. ಪೈವಳಿಕೆಯ ಕ್ರೆಸೆಂಟ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಒಂದನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುವ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಪೈವಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುನಿತ ವಾಲ್ಟಿ ಡಿಸೋಜ ಉದ್ಘಾಟಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹೀಂ ಪಾವಲುಕೋಡಿ, ಉಪಾಧ್ಯಕ್ಷ ರಮೇಶ್ ಪೈವಳಿಕೆ, ಕ್ರೆಸೆಂಟ್ ಸ್ಪೋಟ್ಸ್ ಕ್ಲಬ್‍ನ ಅಬ್ದುಲ್ ರಹಿಮಾನ್, ಮುಖ್ಯೋಪಾಧ್ಯಾಯರಾದ ಇಬ್ರಾಹೀಂ ಬುಡ್ರಿಯ, ಪ್ರಾಂಶುಪಾಲ ವಿಶ್ವನಾಥ ಕುಂಬಳೆ, ರಾಧಾಕೃಷ್ಣ ಕಾಯರ್‍ಕಟ್ಟೆ ಉಪಸ್ಥಿತರಿದ್ದರು.

No comments:

Post a Comment