BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಜಿಲ್ಲಾ ಕಲೋತ್ಸವ ವಿಜೇತರು
ಪೈವಳಿಕೆನಗರ, .8: ಕಾಸರಗೋಡು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಪೈವಳಿಕೆನಗರ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಥಾನಗಳನ್ನು ಗಳಿಸಿದ್ದಾರೆ. ಹಯರ್ ಸಕೆಂಡರಿ ವಿಭಾಗದಲ್ಲಿ ಕನ್ನಡ ಕವಿತಾ ರಚನೆ ಮತ್ತು ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಪ್ಲಸ್ ಟು ವಿದ್ಯಾರ್ಥಿನಿ ಶ್ರದ್ಧಾ ಎನ್ ಎ ಗ್ರೇಡಿನೊಂದಿಗೆ ಪ್ರಥಸ್ಥಾನಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಯರ್ ಸೆಕೆಂಡರಿ ವಿಭಾಗದ ಕನ್ನಡ ಕಥಾರಚನೆಯಲ್ಲಿ ಸುಮಾ ಸಿ.ಎಚ್ ಎ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನ, ಹೈಸ್ಕೂಲ್ ವಿಭಾಗದ ಕನ್ನಡ ಪ್ರಬಂಧ ರಚನೆಯಲ್ಲಿ 8ನೇ ತರಗತಿಯ ಕಾರ್ತಿಕ್. ಎ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನಗಳಿಸಿದ್ದಾರೆ. ವಿಜೇತರಿಗೆ ರಕ್ಷಕ ಶಿಕ್ಷಕ ಸಂಘ ಅಭಿನಂದನೆಗಳನ್ನು ಸಲ್ಲಿಸಿದೆ.

No comments:

Post a Comment