BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಪೈವಳಿಕೆನಗರ ಶಾಲೆಯಲ್ಲಿ ಶತಮಾನೋತ್ಸವ ಆಚರಣಾ ಸಮಿತಿ ರೂಪೀಕರಣ ಸಭೆ

ಪೈವಳಿಕೆನಗರ, .27: ಪೈವಳಿಕೆನಗರ ಶಾಲೆಯಲ್ಲಿ ಶತಮಾನೋತ್ಸವ ಸಮಿತಿ ರೂಪೀಕರಣ ಸಭೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಪೈವಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಜೆ ಶೆಟ್ಟಿ ಉದ್ಘಾಟಸಿದರು. ಶಾಲಾ ಪಿಟಿಎ ಅಧ್ಯಕ್ಷರಾದ ಶ್ರೀ ಲಾರೆನ್ಸ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುನಿತಾ ವಾಲ್ಟಿ ಡಿಸೋಜಾ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಸಹ ಯೋಜನಾಧಿಕಾರಿ ಶ್ರೀನಿವಾಸ ಕೆ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಿವಿಧ ಕ್ಲಬ್ ಗಳ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಹಳೆ ವಿದ್ಯಾರ್ಥಿಗಳು, ಸಮಾಜಸೇವಕರು, ನಿವೃತ್ತ ಶಿಕ್ಷಕರು ಭಾಗವಹಿಸಿದ್ದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ಯಾಮಲಾ ಪಿ ಸ್ವಾಗತಿಸಿ ಪ್ರಾಂಶುಪಾಲರಾದ ಶ್ರೀ ವಿಶ್ವನಾಥ ಕುಂಬಳೆ ಧನ್ಯವಾದ ಸಲ್ಲಿಸಿದರು. ಶಾಲಾ ಉದ್ಯೋಗಿಗಳ ಸಂಘದ ಕಾರ್ಯದರ್ಶಿ ಶ್ರೀ ಕೃಷ್ಣಮೂರ್ತಿ ಎಂ ಎಸ್ ಕಾರ್ಯಕ್ರಮ ನಡೆಸಿಕೊಟ್ಟರು.

No comments:

Post a Comment